Odeda Manasu : Mano Vaijnanika Kadambari - 5 - Beetle Book Shop

ಗಿರಿಮನೆ ಶ್ಯಾಮರಾವ್ ಅವರ ಪುಸ್ತಕಗಳು | Girimane Shamrao Books – Beetle Bookshop

ಫಲಿತಾಂಶಗಳ ಪಟ್ಟಿಗೆ ಹೋಗಿ

ಸಕ್ರಿಯ ಶೋಧಕಗಳು:

27 items
ಕಾಲಮ್ ಗ್ರಿಡ್
ಕಾಲಮ್ ಗ್ರಿಡ್

ಶೋಧಿಸಿ

ಸಕ್ರಿಯ ಶೋಧಕಗಳು:

ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ಪ್ರಕಾರಗಳಲ್ಲಿ ಓದುಗರಿಗೆ ಮೆಚ್ಚುವಂತಹ 26ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಗಿರಿಮನೆ ಪ್ರಕಾಶನ ಮೂಲಕ ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ.