{"product_id":"begumpura-the-social-vision-of-anticaste-intellectuals","title":"ಬೇಗುಂಪುರ | ಬೆಗಂಪುರ ಸಾಮಾಜಿಕ ದೃಷ್ಟಿ ಪುಸ್ತಕ","description":"ಭಕ್ತಿ ಚಳವಳಿಯ ತೀವ್ರಗಾಮಿ ಸಂತ ರವಿದಾಸ್ (ಕ್ರಿ.ಶ. 1450-1520) ತನ್ನನ್ನು ತಾನು 'ಈಗ ಸ್ವತಂತ್ರನಾಗಿರುವ ಚಮ್ಮಾರ' ಎಂದು ಕರೆದುಕೊಳ್ಳುತ್ತಾನೆ. ತನ್ನ \"ಬೇಗಂಪುರ\" ಹಾಡಿನಲ್ಲಿ ಭಾರತೀಯ ಆದರ್ಶರಾಜ್ಯವನ್ನು - ಒಂದು ಆಧುನಿಕ ಜಾತಿರಹಿತ, ವರ್ಗರಹಿತ, ತೆರಿಗೆ-ಮುಕ್ತ ನಗರವನ್ನು -ಮೊದಲು ಕಲ್ಪಿಸಿಕೊಂಡವನು. ಇದು ಬ್ರಾಹ್ಮಣೀಯ ಕಲಿಯುಗದ  ನರಕಸದೃಶ ಕಲ್ಪನೆಗೆ ವ್ಯತಿರಿಕ್ತವಾಗಿತ್ತು.\u003cbr data-mce-fragment=\"1\"\u003e\u003cbr data-mce-fragment=\"1\"\u003eಭಾರತವನ್ನು 'ಪುನಃಶೋಧಿಸಲು' ಪೌರಸ್ತ್ಯವಾದಿ, ರಾಷ್ಟ್ರೀಯವಾದಿ ಮತ್ತು ಹಿಂದುತ್ವವಾದಿ ಪ್ರವೃತ್ತಿಗಳನ್ನು ತಿರಸ್ಕರಿಸುತ್ತಾ, ಗೇಲ್ ಓಮ್ವೆಟ್ ಅವರು ಐದು ಶತಮಾನಗಳ ಅವಧಿಯಲ್ಲಿ ವ್ಯಾಪಿಸಿಕೊಂಡಿರುವ ತಳಸ್ತರೀಯ ದಾರ್ಶನಿಕರ ವಿಶ್ವ ದೃಷ್ಟಿಕೋನವನ್ನು ಒಟ್ಟುಗೂಡಿಸಿ ಇಲ್ಲಿ ನೀಡಿದ್ದಾರೆ - ಚೋಖಾಮೇಳ, ಜನಾಬಾಯಿ, ಕಬೀರ್, ರವಿದಾಸ್, ತುಕಾರಾಂ, ಕರ್ತಾಭಜ, ಫುಲೆ, ಅಯೋತಿ ದಾಸ್, ಪಂಡಿತಾ ರಮಾಬಾಯಿ, ಪೆರಿಯಾರ್ , ಅಂಬೇಡ್ಕರ್ ಇವರ ದೃಷ್ಟಿಕೋನವು ಗಾಂಧಿಯವರ ರಾಮರಾಜ್ಯ ಆದರ್ಶದ ಗ್ರಾಮರಾಜ್ಯ, ನೆಹರು ಅವರ ಹಿಂದೂತ್ವ-ಲೇಪಿತ ಬ್ರಾಹ್ಮಣೀಯ ಸಮಾಜವಾದ ಮತ್ತು ಸಾವರ್ಕರ್ ಅವರ ಪ್ರಾದೇಶವಾದಿ ಹಿಂದೂ ರಾಷ್ಟ್ರ ಪರಿಕಲ್ಪನೆಗಳಿಗೆ ವ್ಯತಿರಿಕ್ತವಾಗಿದೆ. ತಾರ್ಕಿಕತೆ ಮತ್ತು ಭಾವಪರವಶತೆ-ಜ್ಞಾನ ಮತ್ತು ಭಕ್ತಿಗಳ-ಪಥವು 'ವಾಗ್ದಾನಿತ' ನಾಡಿಗೆ ಕರೆದೊಯ್ಯುತ್ತದೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಗೇಲ್ ಓಮ್ವೆಟ್ ಅವರು 'ದಲಿತ್ ಅಂಡ್ ದ ಡೆಮಾಕ್ರಟಿಕ್ ರೆವಲ್ಯೂಷನ್', 'ಬುದ್ಧಿಸಂ ಇನ್ ಇಂಡಿಯಾ: ಚಾಲೆಂಜಿಂಗ್ ಬ್ರಾಹ್ಮಣಿಸಂ ಅಂಡ್ ಕ್ಯಾಸ್ಟ್' ಮತ್ತು 'ಅಂಬೇಡ್ಕರ್: ಟುವರ್ಡ್ಸ್ ಆ್ಯನ್ ಎನ್ಲೈಟನ್ಡ್ ಇಂಡಿಯಾ' ಮತ್ತಿತರ ಪುಸ್ತಕಗಳ ಲೇಖಕರಾಗಿದ್ದಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಡಾ. ಬಂಜಗೆರೆ ಜಯಪ್ರಕಾಶ ಕನ್ನಡದ ಹೆಸರಾಂತ ಲೇಖಕ, ಸಂಸ್ಕೃತಿ ಚಿಂತಕ ಮತ್ತು ಸಾಮಾಜಿಕ ಹೋರಾಟಗಾರರಾಗಿದ್ದು ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಅಲ್ಲದೆ, ಇಂಗ್ಲಿಷ್ ಮತ್ತು ತೆಲುಗು ಭಾಷೆಗಳ ಹಲವು ಕೃತಿಗಳ ಅನುವಾದಕರೂ ಆಗಿದ್ದಾರೆ.\u003cbr data-mce-fragment=\"1\"\u003e","brand":"Social Justice \u0026 Philosophy | ಸಾಮಾಜಿಕ ನ್ಯಾಯ ಮತ್ತು ಚಿಂತನೆ","offers":[{"title":"Default Title","offer_id":46783513297179,"sku":"","price":276.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/begumpura-the-social-vision-of-anticaste-intellectuals-8492707.png?v=1767536947","url":"https:\/\/beetlebookshop.com\/kn\/products\/begumpura-the-social-vision-of-anticaste-intellectuals","provider":"Beetle Book Shop","version":"1.0","type":"link"}