{"product_id":"katari-anchina-nadige-contemporary-parodies","title":"ಕಠಾರಿ ಅಂಚಿನ ನಡಿಗೆ ( ಸಮಕಾಲೀನ ವಿಡಂಬನೆಗಳು )","description":"\u003cp\u003eಚಂದ್ರಪ್ರಭ ಕಠಾರಿಯವರ ಪ್ರಸ್ತುತ ಪುಸ್ತಕ 'ಕಠಾರಿ ಅಂಚಿನ ನಡಿಗೆ', ಅವರು ಸಾಂದರ್ಭಿಕವಾಗಿ ಬರೆದ 34 ಅಂಕಣ ಬರೆಹಗಳ ಸಂಕಲನ. ನೇರ ಮತ್ತು ಖಚಿತ ಮಾತುಗಳಿಗೆ ಹೆಸರಾಗಿರುವ ಅವರು ಈ ಪುಸ್ತಕದಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳು ಕೂಡಾ ಎಷ್ಟು ಪರಿಣಾಮಕಾರಿಯಾಗಬಲ್ಲವು ಎಂಬುದನ್ನು ಓದುಗರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ.\u003c\/p\u003e\n\u003cp\u003eಹೀಗೆ ಬರೆಯಲು ಬೇಕಾದ ಧೈರ್ಯ ಅವರಲ್ಲಿರುವುದು ವಿಶೇಷವೇ ಸರಿ. ಅನೇಕರು ಗುಟ್ಟಾಗಿ ಮಾತಾಡಲೂ ಹೆದರುವ ವಿಷಯಗಳ ಬಗ್ಗೆ ಕಠಾರಿಯವರು ಇಲ್ಲಿ ಯಾವ ಸಂಕೋಚವೂ ಇಲ್ಲದೆ ಬರೆದಿದ್ದಾರೆ.\u003c\/p\u003e\n\u003cp\u003eಕಠಾರಿಯವರ ಹರಿತವಾದ ವ್ಯಂಗ್ಯ-ವಿಡಂಬನೆಗಳು ವರ್ತಮಾನದ ಹಲವು ಘಟನೆಗಳ ಸುತ್ತ ಬೆಳೆದಿವೆ. ಕೋಮುವಾದ, ದ್ವೇಷ ಭಾಷಣ, ಧಾರ್ಮಿಕ ಅವಾಂತರಗಳು, ಬಡವರ ಮನೆಯ ಮೇಲೆ ಮಾತ್ರ ಹರಿಯುವ ಬುಲ್ಲೋಜರುಗಳು, ಭ್ರಷ್ಟಾಚಾರದ ಹೆಚ್ಚಳ, ಪಠ್ಯ ಪುಸ್ತಕ ರಚನೆಯ ಬಿಕ್ಕಟ್ಟುಗಳು, ಮಾಧ್ಯಮಗಳ ದಯನೀಯ ಸ್ಥಿತಿ, ದಿಢೀರನೆ ಹುಟ್ಟಿ ಮಾಯವಾದ ಉರಿಗೌಡ- ನಂಜೇಗೌಡರು, ವಾಟ್ಸಪ್ ವಿಶ್ವವಿದ್ಯಾಲಯದ ಪದವೀಧರರ ಜ್ಞಾನ ಮೀಮಾಂಸೆ, ಸುಳ್ಳುಗಳ ವಿಜೃಂಭಣೆ, ನಕಲಿ ನಾಯಕರ ಕಿತಾಪತಿಗಳು, ಸಮಾಜವನ್ನು ಹಿಂದಕ್ಕೆ ತಳ್ಳುತ್ತಿರುವ ಮೌಡ್ಯಗಳು, ರಾಜಕಾರಣಿಗಳ ಹಾಸ್ಯಾಸ್ಪದ ಹೇಳಿಕೆಗಳು, ಟ್ರೋಲ್ ಗಿರಾಕಿಗಳ ಕಷ್ಟಗಳೇ ಮೊದಲಾದ ಹಲವು ಸಂಗತಿಗಳು ಇಲ್ಲಿ ಕಠಾರಿಯವರ ಮಾತಿನೇಟಿಗೆ ಗುರಿಯಾಗಿವೆ.\u003c\/p\u003e\n\u003cp\u003eಕನ್ನಡದಲ್ಲಿ ಪೂರ್ಣಚಂದ್ರ ತೇಜಸ್ವಿ, ಲಂಕೇಶ್ ಮೊದಲಾದವರು ವ್ಯಂಗ್ಯವನ್ನು ಪರಿಣಾಮಕಾರಿಯಾಗಿ ಬಳಸಿದ್ದುಂಟು. ಚಾಪ್ಲಿನ್ ಈ ವಿಷಯದಲ್ಲಿ ಅದ್ಭುತವನ್ನೇ ಸಾಧಿಸಿದ. ನಮ್ಮ ಸಾಮಾನ್ಯ ಗ್ರಹಿಕೆಗಳಲ್ಲಿಯ ವಿರೋಧಾಭಾಸಗಳನ್ನು ಅವರು ದಿಟ್ಟವಾಗಿ ಬಯಲಿಗೆಳೆದಿದ್ದರು. ಲಂಕೇಶರು ಬಳಸಿದ 'ಬಂ' ಮತ್ತು 'ಗುಂ' ಪದಗಳು ಒಂದು ಕಾಲಕ್ಕೆ ರಾಜ್ಯದ ರಾಜಕಾರಣವನ್ನೇ ಅಲ್ಲಾಡಿಸಿದ್ದವು. ಈ ಪರಂಪರೆಯನ್ನು ತನ್ನದೇ ರೀತಿಯಲ್ಲಿ ಮುಂದುವರೆಸಿರುವ ಚಂದ್ರಪ್ರಭ ಕಠಾರಿಯವರು ವರ್ತಮಾನ ಕಾಲದಲ್ಲಿ ಪ್ರಚಲಿತದಲ್ಲಿರುವ ಅನೇಕ ಪದಗಳನ್ನು ಈ ಪುಸ್ತಕದಲ್ಲಿ ಬಳಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇವು ಭಾಷಾಭ್ಯಾಸಿಗಳ ಪ್ರಯೋಜನಕ್ಕೂ ಬರಬಹುದು.\u003c\/p\u003e\n\u003cp\u003eಕಠಾರಿಯವರ ವ್ಯಂಗ್ಯ ಮತ್ತು ವಿಡಂಬನೆಗಳು ವಾಸ್ತವದ ವೈರುದ್ಧಗಳನ್ನು ದಿಟ್ಟವಾಗಿ ತೆರೆದಿಡುತ್ತವೆ. ಇವುಗಳ ಓದು ಸಮಾಜದ ಹಲವು ಬೆಳವಣಿಗೆಗಳ ಬಗ್ಗೆ ಮಾತಾಡಲು ಮತ್ತು ಚರ್ಚಿಸಲು ಪ್ರಚೋದನೆ ನೀಡುತ್ತದೆ. ಮಾನವನ ಮೂರ್ಖತನಗಳ ಬಗ್ಗೆ ಲೇಖಕರು ಬರೆಯದೇ ಹೋದರೆ ಮತ್ಯಾರು ಬರೆಯಬೇಕು?\u003c\/p\u003e\n\u003cp\u003e-ಪುರುಷೋತ್ತಮ ಬಿಳಿಮಲೆ\u003c\/p\u003e","brand":"BEETLE BOOK SHOP","offers":[{"title":"Default Title","offer_id":48657157194011,"sku":"","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/katari-anchina-nadige-contemporary-parodies-4569748.jpg?v=1767533525","url":"https:\/\/beetlebookshop.com\/kn\/products\/katari-anchina-nadige-contemporary-parodies","provider":"Beetle Book Shop","version":"1.0","type":"link"}