ಹೆಚ್ಚುವರಿ ಮಾಹಿತಿ
ವಿವರಣೆ
2006ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ಸುರೇಖಾ ಭೋತ್‌ಮಾಂಗೆ ಮತ್ತವರ ಮಗಳು ಪ್ರಿಯಾಂಕ ಭೋತ್‌ನಾಂಗೆಯವರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿ ಸತತವಾಗಿ ಅತ್ಯಾಚಾರ ನಡೆಸಿ ಕೊಲ್ಲಲಾಯಿತು. ಸುರೇಖಾರ ಮಕ್ಕಳಾದ ರೋಷನ್ ಮತ್ತು ಸುಧೀರ್‌ರನ್ನು ಕೊಚ್ಚಿ ಕೊಲ್ಲಲಾಯಿತು. ಈ ಭೀಕರ ಹತ್ಯಾಕಾಂಡದಲ್ಲಿ ಹಳ್ಳಿಯೇ ತೊಡಗಿಕೊಂಡಿತ್ತು. ಭೋತ್‌ಮಾಂಗೆಗಳು ದಲಿತರಾಗಿದ್ದರು. ಭೋತ್‌ಮಾಂಗೆಗಳನ್ನು ಈಗ ಮರೆತುಬಿಡಲಾಗಿದೆ. ಏಕೆಂದರೆ, ಹೇಗಿದ್ದರೂ ಈ ದೇಶದಲ್ಲಿ ದಿನಕ್ಕೆರಡು ದಲಿತರ ಕೊಲೆಯಾಗುತ್ತಲೇ ಇದೆ.
ಡಾ. ಆನಂದ್ ತೇಲ್‌ತುಂಬೆಯವರು ಸ್ವಾತಂತ್ರೋತ್ತರ ಭಾರತದ ಅತ್ಯಂತ ಹೀನಾಯ ಜಾತಿ ದೌರ್ಜನ್ಯವೊಂದನ್ನು ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ ಮತ್ತು ಹೇಗೆ ನಮ್ಮ ಸುತ್ತ ಮುತ್ತ ಸದಾ ಖೈರ್ಲಾಂಜಿಗಳು ಇದ್ದೇ ಇವೆಯೆಂದು ತಿಳಿಸಿಕೊಟ್ಟಿದ್ದಾರೆ.
ಆನಂದ್ ತೇಲ್ತುಂಬ್ಳೆಯವರ ವಿಶ್ಲೇಷಣೆ ನಮ್ಮ ಸಮಾಜದ ಹೃದಯಕ್ಕೆ ಗ್ಯಾಂಗ್ರೀನ್ ಹಿಡಿದಿರುವುದನ್ನು ಎತ್ತಿತೋರಿಸುತ್ತದೆ. ಆನಂದರ ಪುಸ್ತಕ ಈ ಹತ್ಯೆಯು ಯಾವ ಸಾಮಾಜಿಕ ಸಂದರ್ಭದೊಳಗೆ ಸಂಭವಿಸಿತೆಂಬ ವಿಶ್ಲೇಷಣೆಯನ್ನು ಒದಗಿಸುವುದಲ್ಲದೆ, ಯಾವ ರೀತಿಯಲ್ಲಿ ಸಾಮಾಜಿಕ, ರಾಜಕೀಯ ಮತ್ತು ಪ್ರಭುತ್ವ ಯಂತ್ರಾಂಗಗಳು, ಪೊಲೀಸರು, ಸಮೂಹ ಮಾಧ್ಯಮಗಳು, ಮತ್ತು ನ್ಯಾಯಾಂಗಗಳು ಎಲ್ಲವೂ ಒಂದಾಗಿ ಇಂಥ ದೌರ್ಜನ್ಯಗಳು ಸಂಭವಿಸುವಂಥಾ ವಾತವರಣವನ್ನೂ ಸೃಷ್ಟಿಸಿದವು ಎಂಬದನ್ನೂ ಮತ್ತು ಆನಂತರ ಹೇಗೆ ಅದನ್ನು ಮುಚ್ಚಿಹಾಕಲು ಪ್ರಯತ್ನಿಸಿದವು ಎಂಬುದನ್ನೂ ವಿವರಿಸುತ್ತದೆ. ಇದು ಅಳಿದುಳಿದ ಊಳಿಗಮಾನ್ಯ ವ್ಯವಸ್ಥೆಯ ಕೊನೆಯ ದಿನಗಳ ಬಗೆಗಿನ ಪುಸ್ತಕವಲ್ಲ, ಬದಲಿಗೆ ನಮ್ಮ ದೇಶದಲ್ಲಿ ಆಧುನಿಕತೆಗೆ ಏನರ್ಥ ಎಂಬುದರ ಬಗೆಗಿನ ಪುಸ್ತಕ.
- ಅರುಂಧತಿ ರಾಯ್
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.