ಹೆಚ್ಚುವರಿ ಮಾಹಿತಿ
ವಿವರಣೆ
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡರು ಸರಳತೆಗೆ, ಸೌಜನ್ಯತ್ತೆಗೆ, ಕ್ರಿಯಾಶೀಲತೆಗೆ ಹಾಗೂ ದೃಢ ನಿಲುವಿಗೆ ಖ್ಯಾತನಾಮರು.
ಜನಸಾಮಾನ್ಯರ ಬದುಕು ಬವಣೆಗಳನ್ನು ಸ್ವತಃ ಅನುಭವಿಸಿ ಜೀವನಾನುಭವ ಹೊಂದಿರುವ ಗೌಡರು ಜನಸಾಮಾನ್ಯರ ಕ್ಷೇಮಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು ಜನನಾಯಕರೆನಿಕೊಂಡವರು. ನಾಡು, ನುಡಿ, ನೆಲ, ಜಲ ರಕ್ಷಣೆಯ ವಿಷಯದಲ್ಲಿ ಗೌಡರದು ನಿಲ್ಲದ ಪಯಣ. ಮೊದಲ ಬಾರಿಗೆ ಮಹಿಳಾ ಮೀಸಲಾತಿಯನ್ನು ಜಾತಿಗೆ ತಂದ ಕೀರ್ತಿ ದೇವೇಗೌಡರದು. ಸನ್ಮಾನ್ಯ ಶ್ರೀ ದೇವೇಗೌಡರನ್ನು ಕುರಿತು ಈಗಾಗಲೇ ಹಲವು ಕೃತಿಗಳು, ಅಭಿನಂದನಾ ಗ್ರಂಥಗಳು ಪ್ರಕಾಶಿತಗೊಂಡಿವೆ. ಪ್ರಸ್ತುತ ವಿವಿಧ ಸಂಘ ಸಂಸ್ಥೆಗಳಲ್ಲಿ ಹಾಗು ಸೇವಾಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಲೇಖಕರಾದ ಶ್ರೀಯುತ ನೇ. ಭ. ರಾಮಲಿಂಗಶೆಟ್ಟಿ ಅವರು ಶ್ರೀಯುತ ಎಚ್. ಡಿ. ದೇವೇಗೌಡರ ಜೀವನ ಹಾಗೂ ಸಾಧನೆಯನ್ನು ದಾಖಲಿಸುವ ನಿಟ್ಟಿನಲ್ಲಿ 'ಮಣ್ಣಿನ ಮಗ' ಎಂಬ ಕೃತಿಯನ್ನು ರಚಿಸಿರುವುದು ಸ್ತುತ್ಯರ್ಹ. ಗೌಡರ ಬದುಕುನ ಸಾರವನ್ನು ಹಾಗೂ ಅವರ ಸಾಧನೆ ಸಿದ್ಧಿಗಳನ್ನು ತನ್ನೊಡಲಿನೊಳಗೆ ಇರಿಸಿಕೊಂಡಿರುವ ಈ ಕೃತಿಯು ಮುಂದಿನ ತಲೆಮಾರಿನ ಹೃನ್ಮದಲ್ಲಿ ಗೌಡರ ಜೀವನಾದರ್ಶವನ್ನು ಬಿತ್ತಲು ಸಹಕಾರಿಯಾಗಲಿ. ಜನತೆ ಈ ಕೃತಿಯನ್ನು ಆದರಿಂದ ಸ್ವೀಕರಿಸಲೆಂದು, ಶ್ರೀಯುತರಿಂದ ಮತ್ತಷ್ಟು ಮೌಲಿಕವಾದ ಕೃತಿಗಳು ಹೊರಬರಲೆಂದು ಆಶಿಸುತ್ತಾ, ಶ್ರೀಯುತ ಎಚ್. ಡಿ. ದೇವೇಗೌಡರಿಗೆ ಭಗವಂತನು ಆಯುರಾರೋಗ್ಯದಿ ಸಕಲ ಸನ್ಮಂಗಳಗಳನ್ನು ಕರುಣಿಸಲೆಂದು ತುಂಬು ಹೃದಯದಿಂದ ಹಾರೈಸುತ್ತೇನೆ.
ಇಂತು ಭಗವತ್ಸೇವೆಯಲ್ಲಿ,
ಡಾ|| ನಿರ್ಮಲಾನಂದನಾಥ ಸ್ವಾಮೀಜಿ
ಪೀಠಾಧ್ಯಕ್ಷರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.