ಹೆಚ್ಚುವರಿ ಮಾಹಿತಿ
ವಿವರಣೆ
ಅಗಾಧ ಪ್ರತಿಭೆ, ನಿರಂತರ ಹುಡುಕಾಟ, ಅಚಲ ಶ್ರದ್ಧೆ, ಅವಿರತ ದುಡಿಮೆ, ಉಕ್ಕುವ ಚಿಲುಮೆಯಂಥ ಹುಮ್ಮಸ್ಸಿನ ಟಿ.ಎನ್. ಸೀತಾರಾಮ್, ತಾವು ನಡೆದು ಬಂದ ಹಾದಿಯ ನೆನಪುಗಳನ್ನು ಬರೆಯುತ್ತಾ ಹೋಗಿದ್ದಾರೆ. ಅವರೇ ಕರೆದಿರುವಂತೆ ಇವು ನೆನಪಿನ ಪುಟಗಳು. ಆದರೆ, ಆ ನೆನಪುಗಳು ನಮ್ಮನ್ನು ಕೂಡ ಅವರ ಕಾಲಕ್ಕೆ ಕರೆದೊಯ್ಯುತ್ತದೆ. ಟೈಮ್ ಮೆಷೀನಿನಲ್ಲಿ ಹಿಂದಕ್ಕೆ ಹೋಗಿ ಕಾಲಾತೀತರಾಗಿ ಅವರು ಕಂಡದ್ದನ್ನು ನಾವೂ ಕಾಣುತ್ತಾ ಹೋಗುತ್ತೇವೆ. ಹೇಳುವುದಕ್ಕಿಂತ ತೋರಿಸುವುದರಲ್ಲಿ ಸೀತಾರಾಮ್ ಅವರಿಗೆ ಆಸಕ್ತಿ.
ಈ ನೆನಪಿನ ಪುಟಗಳಿಗೆ ಹಲವು ಬಣ್ಣ. ವಿಷಾದ ಮೆತ್ತಿದ ಹಲವು ಪುಟಗಳು, ತಮಾಷೆ ಲೇಪಿಸಿದ ಅನೇಕ ಪುಟಗಳು, ಬದುಕನ್ನು ಅವಡುಗಚ್ಚಿ ದಿಟ್ಟತನದಿಂದ ಎದುರಿಸಿದ ಪುಟಗಳು, ಪ್ರಯೋಗಶೀಲತೆಯ ಪುಟಗಳು, ಹುಡುಕಾಟದ ಸಾಲುಗಳು, ಅಂತರಂಗದ ಪಿಸುಮಾತು, ಲೋಕಾಂತದ ಹೊಸಿಲಿಗೆ ಹಚ್ಚಿದ ಕಿರುದೀಪ-ಎಲ್ಲವನ್ನು ಟಿಎನ್ನೆಸ್ ಸಂತನ ನಿರುಮ್ಮಳ ಧಾಟಿಯಲ್ಲಿ ನಮ್ಮ ಮುಂದಿಟ್ಟಿದ್ದಾರೆ.
ಟಿಎನ್ನೆಸ್ ಅವರ ಐದು ದಶಕಗಳ ಜೀವನ ಚಿತ್ರಗಳಲ್ಲಿ ನೂರಾರು ಜೀವಗಳ ಕತೆಯಿದೆ, ಇಲ್ಲಿ ನಮಗೆ ಬಹುಮುಖಿ ಟಿಎನ್ನೆಸ್ ಸಿಗುತ್ತಾರೆ. ಕೃಷಿಕ, ವಕೀಲ, ಉದ್ಯಮಿ, ನಾಟಕಕಾರ, ನಟ, ನಿರ್ದೇಶಕ, ಸಾಹಿತಿಯಾಗಿ ಅವರನ್ನು ಬಲ್ಲವರಿಗೆ ಮಗ, ತಮ್ಮ, ಅಣ್ಣ, ತಂದೆ, ಗಂಡ, ಗೆಳೆಯ ಟಿಎನ್ನೆಸ್ ಕೂಡ ಎದುರಾಗುತ್ತಾರೆ.
ಇದು ಟಿಎನ್ನೆಸ್ ಒಬ್ಬರ ನೆನಪಿನ ಪುಟಗಳಲ್ಲ, ಒಂದು ಕಾಲಾವಧಿಯ ಜ್ಞಾಪಕ ಚಿತ್ರಶಾಲೆ. ಇದನ್ನು ಓದುತ್ತಾ ನಾನು ಬೆರಗಾಗಿದ್ದೇನೆ, ಮೌನವಾಗಿದ್ದೇನೆ. ತಲ್ಲಣಿಸಿದ್ದೇನೆ, ನಕ್ಕು ಹಗುರಾಗಿದ್ದೇನೆ. ವಿಷಾದದಿಂದ ತೊಯ್ದು ಹೋಗಿದ್ದೇನೆ. ತನ್ನ ಕತೆಯನ್ನು ಮತ್ತೊಬ್ಬರ ಅನುಭವ ಆಗಿಸಲಿಕ್ಕೆ ಪ್ರಾಮಾಣಿಕತೆ ಇದ್ದರೆ ಸಾಕು. ಅದು ಈ ಪುಟಗಳಲ್ಲಿ ದಟ್ಟವಾಗಿದೆ.
̲ ಜೋಗಿ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.