ಹೆಚ್ಚುವರಿ ಮಾಹಿತಿ
ವಿವರಣೆ
ಶಿರ್ಷೇಂದು ಮುಖೋಪಾಧ್ಯಾಯ ಅವರು ತಮ್ಮ ವಿಶಿಷ್ಟ ಬರವಣಿಗೆಯ ಮೂಲಕ ವಿಶ್ವದ ಗಮನ ಸೆಳೆದವರು. ಅವರ ಕಥೆಗಳಲ್ಲಿ ಸೌಮ್ಯ ಭಾಷೆ ಮತ್ತು ಸಂಯಮದ ನಿರೂಪಣೆ ಪ್ರಮುಖ ಅಂಶಗಳಾಗಿವೆ. ಕಥಾವಸ್ತುವಿನ ಆಯ್ಕೆಯಲ್ಲಿ ಅವರ ಎಚ್ಚರಿಕೆಯ ಹೆಜ್ಜೆ ಸ್ಪಷ್ಟವಾಗಿ ಗೋಚರಿಸುತ್ತದೆ. ಕೆಲವೇ ಪಾತ್ರಗಳ ಮೂಲಕ, ಅಚ್ಚುಕಟ್ಟಾದ ಪರಿಸರದ ವಿವರಣೆಯೊಂದಿಗೆ ಸಾಗುವ ಅವರ ಕಥೆಗಳು ಪ್ರತಿಯೊಂದು ಹಂತದಲ್ಲಿಯೂ ಕುತೂಹಲವನ್ನು
ಕಾಪಾಡಿಕೊಳ್ಳುತ್ತವೆ ಎಂಬುದು ಗಮನಾರ್ಹ. ಶಿರ್ಷೇಂದು ಅವರು ವಿಭಿನ್ನ ಕಾಲಘಟ್ಟದಲ್ಲಿ ಬರೆದಿರುವ ಕಥೆಗಳನ್ನು ಆಯ್ದು ಒಂದು ಕಡೆಯಲ್ಲಿ ನೀಡುವ ಪ್ರಯತ್ನ ಶ್ಲಾಘನೀಯ. ಇಲ್ಲಿನ ಕಥೆಗಳು ಬಂಗಾಳದ ಪರಿಸರ, ಕುಟುಂಬ ವ್ಯವಸ್ಥೆ, ಚಿಂತನಾ ವಿಧಾನ, ಜೀವನಶೈಲಿ ಇತ್ಯಾದಿಗಳ ಮೇಲೆಯೂ ಬೆಳಕು ಚೆಲ್ಲುತ್ತವೆ. ಕಥೆಗಳ ಆಯ್ಕೆಯಲ್ಲಿಯೂ ಜಾಗರೂಕತೆ ಕಂಡುಬರುತ್ತದೆ. ಓದಿದ ನಂತರ ಬಹುಕಾಲ ನೆನಪಿನಲ್ಲಿ
ಉಳಿಯುವಂತಹ ಕಥೆಗಳನ್ನು ನೀಡಿದ ಶಿರ್ಷೇಂದು ಅವರು ಅಭಿನಂದನಾರ್ಹರು.
ಡಾ. ನಾಗ ಎಚ್. ಹುಬ್ಳಿಯವರು ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದು, ಅತ್ಯಂತ ಸರಳ ರೂಪದಲ್ಲಿ ಬಂಗಾಳಿಯಿಂದ ನೇರವಾಗಿ ಕನ್ನಡಕ್ಕೆ ಈ ಕಥೆಗಳನ್ನು ತಂದಿದ್ದಾರೆ. ಕನ್ನಡ ಪುಸ್ತಕ ಲೋಕಕ್ಕೆ ಈ ಕೃತಿ ಒಂದು ಉತ್ತಮ ಸೇರ್ಪಡೆ.
-ಪ್ರೊ. ಶಾಂತಿ ಗಂಗೂಲಿ (ರಾಂಚಿ ವಿಶ್ವವಿದ್ಯಾಲಯ)
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.